Thursday, June 4, 2026
Homeತಾಜಾ ಸುದ್ದಿಅಗತ್ಯ ವಸ್ತುಗಳಿಗೆ ಜಿಎಸ್ಟಿ ಇಲ್ಲ, ನೋಟೀಸ್ ‌ನೀಡಲ್ಪಟ್ಟಿರುವ ಹಳೆ ಬಾಕಿ‌ ಮನ್ನಾ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅಗತ್ಯ ವಸ್ತುಗಳಿಗೆ ಜಿಎಸ್ಟಿ ಇಲ್ಲ, ನೋಟೀಸ್ ‌ನೀಡಲ್ಪಟ್ಟಿರುವ ಹಳೆ ಬಾಕಿ‌ ಮನ್ನಾ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಯುಪಿಐ ಮೂಲಕ ವಹಿವಾಟು ನಡೆಸುತ್ತಿದ್ದ ಸಣ್ಣ ವರ್ತಕರಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಅಂತಹ ವ್ಯಾಪಾರಿಗಳಿಗೆ ನೋಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ತಿಳಿಸಿರುವ ಸಿಎಂ, ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದು ಹೇಳಿದ್ದಾರೆ.

ಇನ್ನು ನೋಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು, ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ ಎಂದು ಕೂಡಾ ಸಿಎಂ ಸ್ಪಷ್ಟಪಡಿಸಿದ್ದಾರೆ.ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕಾಗಿದೆ.ಬೆಂಗಳೂರಿನಲ್ಲಿ ಇಂದು ಸಣ್ಣ ವರ್ತಕರ ಮುಷ್ಕರದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ರಾಜ್ಯ ಸರ್ಕಾರ ಈ ತೀರ್ಮಾನ ಪ್ರಕಟಿಸಿದೆ.

- Advertisement -

Latest News

error: Content is protected !!