Wednesday, June 3, 2026
Homeತಾಜಾ ಸುದ್ದಿಇಂದು ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಬೆಂಗಳೂರು ಪೊಲೀಸರು ಸಲ್ಲಿಸಿದ ಅರ್ಜಿಯ  ವಿಚಾರಣೆ...

ಇಂದು ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಬೆಂಗಳೂರು ಪೊಲೀಸರು ಸಲ್ಲಿಸಿದ ಅರ್ಜಿಯ  ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್: ಮುಂದಿನ ವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ನವದೆಹಲಿ; ಇಂದು ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಬೆಂಗಳೂರು ಪೊಲೀಸರು ಸಲ್ಲಿಸಿದ ಅರ್ಜಿಯ  ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು. ವಿಚಾರಣೆ ಬಳಿಕ ಮುಂದಿನ ವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನಿಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿತು. ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿದ ಸುಪ್ರೀಂ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿತು. ಹಾಗಾಗಿ ಸದ್ಯಕ್ಕೆ ಒಂದು ವಾರಗಳ ಮಟ್ಟಿಗೆ ನಟ ದರ್ಶನ್ ಗೆ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ವಾರ ದರ್ಶನ್ ಗೆ ಜೈಲಾ ಬೇಲಾ ಅನ್ನೋದು ಗೊತ್ತಾಗಲಿದೆ.

ದರ್ಶನ್‌ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿದ್ರೆ, ಸರ್ಕಾರಿ ವಕೀಲರಾಗಿ ಸಿದ್ಧಾರ್ಥ ಲೂಥ್ರಾ ಪ್ರಬಲ ವಾದ ಮಂಡಿಸಿದರು.

- Advertisement -

Latest News

error: Content is protected !!