- Advertisement -
![]()
- Advertisement -
ನವದೆಹಲಿ: ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದಿಂದ ನವದೆಹಲಿಯಲ್ಲಿ ಇಂದು ಭಾಗಿಧಾರಿ ನ್ಯಾಯ ಸಮ್ಮೇಳನ ನಡೆಯುತ್ತಿದೆ.ನವದೆಹಲಿಯ ಥಾಲ್ ಕಠೋರ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಭಾಷಣಕಾರರಾಗಿ ಭಾಗಿಯಾಗಿದ್ದಾರೆ.ಸಮ್ಮೇಳನದ ಹಿನ್ನೆಲೆಯಲ್ಲಿ ಥಾಲ್ ಕಠೋರ ಸ್ಟೇಡಿಯಂ ಸುತ್ತಮುತ್ತ ರಸ್ತೆಯುದ್ದಕ್ಕೂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಗಳು, ಬ್ಯಾನರ್ ಗಳು ರಾರಾಜಿಸುತ್ತಿವೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಸಚಿವ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೆಹಲಿ ರಾಜಕೀಯದತ್ತ ಇದುವರೆಗೂ ಮುಖ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಮಹತ್ವ ಪಡೆದುಕೊಳ್ಳುತ್ತಿದೆ.
- Advertisement -


