Wednesday, June 3, 2026
Homeತಾಜಾ ಸುದ್ದಿಮುಂದಿನ 6 ದಿನ ರಾಜ್ಯದಲ್ಲಿ ಧಾರಾಕಾರ ಮಳೆ

ಮುಂದಿನ 6 ದಿನ ರಾಜ್ಯದಲ್ಲಿ ಧಾರಾಕಾರ ಮಳೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರೀ ಮಳೆ ಸುರಿಯಲಿದ್ದು, ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಮಾಹಿತಿ ಹವಾಮಾನ ಇಲಾಖೆ ನೀಡಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರ್ಗಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!