Saturday, June 6, 2026
Homeಕರಾವಳಿಕನ್ಯಾಡಿಯ ನೂತನ ಪುನಶ್ಚೇತನ ಕೇಂದ್ರಕ್ಕೆ ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್...

ಕನ್ಯಾಡಿಯ ನೂತನ ಪುನಶ್ಚೇತನ ಕೇಂದ್ರಕ್ಕೆ ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಭೇಟಿ

- Advertisement -
- Advertisement -

ಕನ್ಯಾಡಿ: ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜುಲೈ 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ CSR ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಅನುಸರಣೆ ಮತ್ತು ಹಣಕಾಸು ವ್ಯವಸ್ಥಾಪಕ ಶ್ರೀ ಮೋಹನ ಎಸ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!