- Advertisement -
![]()
- Advertisement -
ಹಾಸನ: ದೇವಾಲಯದಿಂದ ಎಲ್ಲರನ್ನೂ ಹೊರಗೆ ಕಳುಹಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅರಸೀಕೆರೆ ತಾಲೂಕಿನ ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ಇಂದು ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ದೇವಾಲಯದ ಬಾಗಿಲು ಮುಚ್ಚಿ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ
ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ದೇವಾಲಯದೊಳಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಡಿಸಿಎಂ ಪೂಜೆ ಮುಗಿಸಿ ಹೊರ ಬಂದ ನಂತರ ಪ್ರತಿಕ್ರಿಯಿಸಿ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿರುವುದು ಭಕ್ತ ಮತ್ತು ಭಗವಂತನಿಗೆ ಸಂಬಂಧಿಸಿದ ವಿಚಾರ ಎಂದು ಹೇಳಿದ್ದಾರೆ.
ಇದೇ ವೇಳೆ, ದೇವಸ್ಥಾನದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಘೋಷಣೆ ಕೂಗಿದ್ದಾರೆ.ಅರಸೀಕೆರೆಯಲ್ಲಿ ಇಂದು ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದರು.
- Advertisement -


