- Advertisement -
![]()
- Advertisement -
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಹಿರಿಯ ಪುತ್ರ ದಿ. ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಪೂಜೆಯಲ್ಲಿ ಭಾಗಿಯಾಗಿದ್ದರು.
ಕುಟುಂಬ ಸಮೇತ ಪುಣ್ಯ ಸ್ಮರಣೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಪುತ್ರನ ಸಮಾಧಿಗೆ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲೆಯ ಟಿ. ಕಾಟೂರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿರುವ ರಾಕೇಶ್ ಸಿದ್ದರಾಮಯ್ಯ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.
ರಾಕೇಶ್ ಸಹೋದರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ರಾಕೇಶ್ ಪತ್ನಿ ಸ್ಮಿತಾ ಸೇರಿದಂತೆ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು.
2016ರ ಜುಲೈನಲ್ಲಿ ಬೆಲ್ಜಿಯಂ ದೇಶದ ಬ್ರುಸೆಲ್ಸ್ ಗೆ ತೆರಳಿದ್ದ ವೇಳೆ ರಾಕೇಶ್ ಮೃತಪಟ್ಟಿದ್ದರು.
- Advertisement -


