ಅಭಿವೃದ್ಧಿಗೆ ಹಣವಿಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು. ನಾವು ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರು ಹೆಚ್ಚಾಗಿ ವಸ್ತುಗಳನ್ನು ಕೊಳ್ಳುತ್ತಿದ್ದು ಇದರಿಂದಾಗಿ ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಇದರ ಪರಿಣಾಮವಾಗಿ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು
ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಬಿಜೆಪಿ ಸರ್ಕಾರವು ನಾಲ್ಕು ವರ್ಷ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.
ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು. ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು.


