Saturday, June 6, 2026
Homeತಾಜಾ ಸುದ್ದಿಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ; ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ; ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿದೆ.

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಕಾರಣದಿಂಗಾಗಿ ನಿರ್ಲಕ್ಷ್ಯ ತೋರಿದಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್ ಪೆಕ್ಟರ್ ಗಿರೀಶ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರವು ದಿಢೀರ್ ಬೆಳವಣಿಗೆ ಎನ್ನುವಂತೆ ಏಕಾಏಕಿ ಯೂಟರ್ನ್ ಹೊಡೆದಿದ್ದು, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್ ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಆದೇಶವನ್ನು ರದ್ದುಗೊಳಿಸಿದೆ.

ಅಂದಹಾಗೇ ಜೂನ್.4, 2025ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಗೆ ಭದ್ರತಾ ಲೋಪದ ಆರೋಪ ಮೇರಗ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಕಬ್ಬನ್ ಪಾರ್ಕ್‌ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು.

- Advertisement -

Latest News

error: Content is protected !!