Saturday, June 6, 2026
Homeತಾಜಾ ಸುದ್ದಿಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ; ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಗೆ ಮುಂದಾದ...

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ; ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಗೆ ಮುಂದಾದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಆರೋಪವನ್ನಿಟ್ಟುಕೊಂಡು ರಾಜ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಂದಾಗಿದ್ದಾರೆ.

ಆಗಸ್ಟ್ 4 ರಂದು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದು, ಮಹಾದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ.

ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಆಗಸ್ಟ್ 4 ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ದಾಖಲೆ ಸಹಿತ ಬಹಿರಂಗಪಡಿಸುವುದಾಗಿ ಕಳೆದ ವಾರ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದ್ದರು.

- Advertisement -

Latest News

error: Content is protected !!