ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ ಒಂದರಂದು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಆಗಸ್ಟ್ 1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 2ರಂದು ಬೆಳಗ್ಗೆ 9.30ಕ್ಕೆ ಎಐಸಿಸಿ ಕಾನೂನು ಮತ್ತು ಮಾಹಿತಿ ಹಕ್ಕು ವಿಭಾಗ ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿರುವ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಐಕ ರಾಹುಲ್ ಗಾಂಧಿ ಮತ್ತಿತರ ಕಾಂಗ್ರೆಸ್ ನಾಯಕರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.


