ಕಾಸರಗೋಡು: ಸ್ವಂತ ತಂದೆಯಿಂದಲೇ ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕ ಮೂಲದವನಾಗಿದ್ದು ಪ್ರಸ್ತುತ ಕಾಂಞಂಗಾಡ್‌ನ ಕ್ವಾರ್ಟರ್ಸ್‌ನಲ್ಲಿ ನೆಲೆಸಿರುೆ 48ರ ಹರೆಯದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಹಾಗೂ ಐವರು ಮಕ್ಕಳ ಜತೆಯಲ್ಲಿ ಆತ ವಾಸಿಸುತ್ತಿದ್ದರು. ವಿದ್ಯಾರ್ಥಿನಿಯ ಮೇಲಿನ ಈ ದೌರ್ಜನ್ಯವು ಹೆರಿಗೆಯ ಸಂದರ್ಭ ತೀವ್ರ ರಕಸ್ರಾವವಾದ ಕಾರಣ ಆಕೆಯನ್ನಖಾಸಗಿ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಬಯಲಾಗಿದೆ.
ಆಸ್ಪತ್ರೆಯ ಅಧಿಕಾರಿಗಳು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಬಾಲಕಿಯಿಂದ ಹೇಳಿಕೆ ಸಂಗ್ರಹಿಸಿ ಪೊಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಬಾಲಕಿಯು ದೌರ್ಜನ್ಯ ನಡೆಸಿದವರ ಮಾಹಿತಿ ನೀಡಲು ಪೊಲೀಸರಲ್ಲಿ ಮುಂದಾಗದ ಹಿನ್ನೆಲೆಯಲ್ಲಿ ನವಜಾತ ಶಿಶುವಿನ ಡಿಎನ್‌ಎ ತಪಾಸಣೆ ನಡೆಸಲು ಪೊಲೀಸರು ಮುಂದಾದರು. ಆಗ ತಂದೆಯೇ ಆರೋಪಿ ಎಂದು ತಿಳಿದು ಬಂದಿತ್ತು. ತಂದೆಯನ್ನು ಬಂಧಿಸಲಾಗಿದ್ದು, ಆತನ ಡಿಎನ್‌ಎ ತಪಾಸಣೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


