Thursday, June 4, 2026
Homeತಾಜಾ ಸುದ್ದಿಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ವಿಚಾರಣೆಯ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಲ್ಪಟ್ಟಿದೆ.ತನ್ನ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಆರೋಪದಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು.

ಜನ ಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಕರಣದ ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿದ್ದು, ಈಗಾಗಲೇ 26 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ.

ಪ್ರಜ್ವಲ್ ಪ್ರಕರಣದಿಂದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬ ತೀವ್ರ ಮುಜುಗರ ಅನುಭವಿಸಿದ್ದು, ಆರೋಪಿ ಪ್ರಜ್ವಲ್ ವಿರುದ್ಧ ಇನ್ನೂ‌ ಮೂರು ಪ್ರಕರಣಗಳು ಬಾಕಿ ಇವೆ.

ಪ್ರಕರಣದಲ್ಲಿ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

- Advertisement -

Latest News

error: Content is protected !!