ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೆಂಪು ಮುರ ಕಲ್ಲು ಹಾಗೂ ಮರಳು ಸಮಸ್ಯೆಯನ್ನು ಪರಿಹಾರ ಮಾಡುವ ವಿಚಾರವಾಗಿ ಜಿಲ್ಲೆಯ ಬಿಜೆಪಿ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ವಿಧಾನಸೌಧದಲ್ಲಿ ಇಂದು ಸಿಎಂ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಸಿದ್ಧರಾಮಯ್ಯ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಲಾಗಿದೆ.
ಜಿಲ್ಲೆಯ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್ ನಿಯೋಗದಲ್ಲಿ ಭಾಗಿಯಾಗಿದ್ದರು.
ಕೆಂಪುಕಲ್ಲು ಸಾಗಾಟಕ್ಕೆ ಸರಳೀಕೃತ ಪರವಾನಿಗೆ ವ್ಯವಸ್ಥೆ, ರಾಜಧನ ಮೊತ್ತ ಕಡಿತ, ಹೊಳೆ ಮರಳು ಸಂಗ್ರಹಕ್ಕೆ ಸ್ಥಳಿಯಾಡಳಿತಕ್ಕೆ ಪರವಾನಿಗೆ ಅಧಿಕಾರ ಸೇರಿದಂತೆ ಹಲವು ಮನವಿಗಳನ್ನು ಸಿಎಂಗೆ ಬಿಜೆಪಿ ನಿಯೋಗ ಸಲ್ಲಿಸಿದೆ.


