- Advertisement -
![]()
- Advertisement -
ಕಾಸರಗೋಡು: ಅಪ್ರಾಪ್ತ ಮಗಳನ್ನು ಗರ್ಭಿಣಿಯನ್ನಾಗಿಸಿದ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಆರೋಪಿ ಕರ್ನಾಟಕ ಮೂಲದವನಾಗಿದ್ದು, ಕಾಞಂಗಾಡ್‌ನ ಪುರಸಭೆಯ ಕ್ವಾರ್ಟರ್ಸ್‌ನಲ್ಲಿ ಪತ್ನಿ ಮತ್ತು ಐದು ಮಕ್ಕಳೊಂದಿಗೆ ವಾಸಿಸುತ್ತಿದ್ದ. ತನ್ನ ಮಗಳು ಹೆರಿಗೆಯಾಗುವ ಒಂದು ತಿಂಗಳ ಮೊದಲು ಗಲ್ಫ್ ಗೆ ಪರಾರಿಯಾಗಿದ್ದ ಆತನನ್ನು ಪೊಲೀಸರು ವಾಪಾಸ್ ಕರೆಸಿ ಅರೆಸ್ಟ್ ಮಾಡಿದ್ದಾರೆ.
ಜುಲೈ 22 ರಂದು 10 ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ನಂತರ ಅತಿಯಾದ ರಕ್ತಸ್ರಾವದಿಂದಾಗಿ ಆಕೆಯನ್ನು ಕಾಞಂಗಾಡ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ..
- Advertisement -


