- Advertisement -
![]()
- Advertisement -
ಬೆಂಗಳೂರು; ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಚಂದ್ರಶೇಖರ ಸಿದ್ದಿ ನೇಣಿಗೆ ಶರಣಾಗಿದ್ದಾರೆ. ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಣ್ಯಪ್ರದೇಶದಲ್ಲಿ ನೇಣಿಗೆ ಶರಣಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋದಲ್ಲಿ ಕಾಣಿಸಿಕೊಂಡಿದ್ದ ಚಂದ್ರಶೇಖರ ಸಿದ್ಧಿ ಆ ಬಳಿಕ ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನೀನಾಸಂನಲ್ಲಿ ರಂಗ ತರಬೇತಿ ಪಡೆದ ಬಳಿಕ ಅವರು ಕಾಮಿಡಿ ಕಿಲಾಡಿ ಶೋದಲ್ಲಿ ಕಾಣಿಸಿಕೊಂಡಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
- Advertisement -


