- Advertisement -
![]()
- Advertisement -
ಉಪ್ಪಿನಂಗಡಿ : ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ 34 ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ಮನೆ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ನಾಪತ್ತೆಯಾದವರು.
ಭೀಮಪ್ಪ-ರೇಷ್ಮಾ ದಂಪತಿ 34 ನೇ ನೆಕ್ಕಿಲಾಡಿ ಎಂಬಲ್ಲಿನ ಇಮ್ಮಿಯಾಜ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಭೀಮಪ್ಪ ನಾಗರ ಪಂಚಮಿ ಹಬ್ಬಕ್ಕಾಗಿ ಜು. 26ರಂದು ಹಾವೇರಿಗೆ ಹೋಗಿದ್ದರು. ಜು. 30ರಂದು ಅವರು ಹಿಂತಿರುಗಿ ಬಂದಾಗ ಪತ್ನಿ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
- Advertisement -


