Monday, June 8, 2026
Homeಕರಾವಳಿಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ; ಆರೋಪಿ ಸಹಿತ ಮರಳುಗಾರಿಕೆ ಬಳಸಿದ ಸೊತ್ತು ವಶಕ್ಕೆ

ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ; ಆರೋಪಿ ಸಹಿತ ಮರಳುಗಾರಿಕೆ ಬಳಸಿದ ಸೊತ್ತು ವಶಕ್ಕೆ

- Advertisement -
- Advertisement -

ಬಂಟ್ವಾಳ: ಇಲ್ಲಿನ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ, ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.

ಹೊಳೆಯಿಂದ ಯಂತ್ರದ ಮೂಲಕ ಆರೋಪಿ ಅಬ್ದುಲ್ ಸಮದ್ ಎಂಬಾತನು ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿದ್ದು, ಈ ವಿಚಾರವನ್ನ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್ ನಷ್ಟು ಮರಳು ಮತ್ತು ಯಂತ್ರ, ಕಬ್ಬಿಣದ ಜಾಲರಿ, ಪೈಬರ್ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದ್ದು, ಎಲ್ಲಾ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

- Advertisement -

Latest News

error: Content is protected !!