- Advertisement -
![]()
- Advertisement -
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣದ ಕುರಿತ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ್ದಾರೆ.
ವಿಧಾನಸೌಧದಲ್ಲಿರುವ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಶಾಲಿನಿ ರಜನೀಶ್ ಜೊತೆ ಪ್ರಣಬ್ ಮೊಹಂತಿ ಚರ್ಚೆ ನಡೆಸಿದ್ದಾರೆ.
ಧರ್ಮಸ್ಥಳದ ಪ್ರಕರಣದ ತನಿಖಾ ಬೆಳವಣಿಗೆಗಳ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿಗೆ ವಿವರಣೆ ನೀಡಿರುವ ಸಾಧ್ಯತೆ ಇದ್ದು, ಕೇಂದ್ರ ಸೇವಾ ಪಟ್ಟಿಯಲ್ಲಿ ಆಯ್ಕೆಯಾಗಿರುವ ಕುರಿತು ಕೂಡಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಪ್ರಣಬ್ ಮೊಹಂತಿ ಭೇಟಿಯಾಗಿದ್ದರು.
- Advertisement -


