Monday, June 8, 2026
Homeಕರಾವಳಿಮಂಗಳೂರುವಿಟ್ಲ; ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ; ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ವಿಟ್ಲ;  ದಿನಾಂಕ:02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು(ಕಾ&ಸು) ವಿಟ್ಲ ಪೊಲೀಸ್ ಠಾಣೆರವರು ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮಧ್ಯಾಹ್ನ ಸಮಯ ಉಕ್ಕಡ ಕಡೆಯಿಂದ ವಿಟ್ಲ ಕಡೆಗೆ ಎರಡು ಲಾರಿಗಳು ಬರುತ್ತಿದ್ದನ್ನು ನೋಡಿ, ಅವುಗಳನ್ನು ನಿಲ್ಲಿಸಿ, ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಕೆಂಪು ಕಲ್ಲು ಸಾಗಾಟದ ಬಗ್ಗೆ ಪರವಾನಿಗೆಯನ್ನು ಲಾರಿಗಳ ಚಾಲಕರಲ್ಲಿ  ಕೇಳಿದಾಗ ಪರವಾನಿಗೆ ಇಲ್ಲವೆಂದು ಲಾರಿಗೆ ಕೇರಳದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿ ನಾಸೀರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ತಿಳಿಸಿರುತ್ತಾರೆ.

ಲಾರಿಗಳನ್ನು ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!