- Advertisement -
![]()
- Advertisement -
ಬೆಂಗಳೂರು: ಆಗಸ್ಟ್ 10 ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಬೆಂಗಳೂರಿಗೆ ಭೇಟಿ ನೀಡಲಿರುವ ನರೇಂದ್ರ ಮೋದಿ 19.5 ಕಿ.ಮೀ. ಉದ್ದದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದೇ ವೇಳೆ 44.65 ಕಿ.ಮೀ ಉದ್ದದ ಮೆಟ್ರೋ ಮೂರನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ನಗರ ವ್ಯವಹಾರಗಳ ಇಲಾಖೆ ಸಚಿವ ಮನೋಹರಲಾಲ್ ಕೂಡಾ ಮೆಟ್ರೋ ಮಾರ್ಗ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- Advertisement -


