Saturday, June 6, 2026
Homeಕರಾವಳಿಉಡುಪಿವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಿಂದ ಪರಾರಿ

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಿಂದ ಪರಾರಿ

- Advertisement -
- Advertisement -

ಉಡುಪಿ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ಸೋಮವಾರ ನಡೆದಿದೆ.

ಅತೀ ವೇಗವಾಗಿ ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ದೂರು ದಾಖಲಾಗಬೇಕಿದೆ.

- Advertisement -

Latest News

error: Content is protected !!