Wednesday, June 24, 2026
Homeಕರಾವಳಿಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಆ ಫೇಸ್ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದು ದಿನಾಂಕ: 04-08-2025 ರಂದು ಕಂಡುಬಂದಿರುತ್ತದೆ.‌ ಆ ಫೆಸ್ಬುಕ್ ಸಂದೇಶದಿಂದ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾಧ್ಯತೆ ಇರುವುದರಿಂದ, ಆ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!