Friday, June 5, 2026
Homeಕರಾವಳಿಉಡುಪಿಆ.7 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಆ.7 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲೆಡೆ ಭಾರೀ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಗುರುವಾರ (ಆ.7) ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್‌, ಕಲಬುರಗಿ, ವಿಜಯಪುರ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆ.8ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು, ಬೆಂಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಗುರುವಾರ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಆ.12ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ.

ಪೂರ್ವ-ಪಶ್ಚಿಮವಾಗಿ ಸಿಯಝೋನ್‌ 12 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 3.1 ಹಾಗೂ 7.6 ಕಿ.ಮೀ ಎತ್ತರದ ಮಧ್ಯದಲ್ಲಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.12ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

- Advertisement -

Latest News

error: Content is protected !!