Wednesday, June 24, 2026
Homeಕರಾವಳಿಧರ್ಮಸ್ಥಳದಲ್ಲಿ ಘರ್ಷಣೆ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಧರ್ಮಸ್ಥಳದಲ್ಲಿ ಘರ್ಷಣೆ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

- Advertisement -
- Advertisement -

ಧರ್ಮಸ್ಥಳದಲ್ಲಿ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.  ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ‌ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ  ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಹಾಗೇ  ಧರ್ಮಸ್ಥಳ ಪಾಂಗಾಳದಲ್ಲಿ (ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ), ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಇನ್ನು ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿ, ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ. ಈ ದಿನ ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!