Friday, June 5, 2026
Homeಕರಾವಳಿಧರ್ಮಸ್ಥಳ ಗಲಾಟೆಯನ್ನು ಗೃಹ ಸಚಿವರು ನಿರ್ವಹಿಸುತ್ತಾರೆ; ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಗಲಾಟೆಯನ್ನು ಗೃಹ ಸಚಿವರು ನಿರ್ವಹಿಸುತ್ತಾರೆ; ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ಇಂದು ಸಂಜೆ ನಡೆದ ಗಲಾಟೆ ವಿಚಾರವನ್ನು ಗೃಹ ಸಚಿವರು ನಿರ್ವಹಣೆ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಘಟನೆ ಕುರಿತು ಬೆಂಗಳೂರಿನಲ್ಲಿ ಇಂದು ಸಂಜೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನನಗೆ ಇನ್ನೂ ಮಾಹಿತಿ ಬಂದಿಲ್ಲ ಎಂದಷ್ಟೇ ಹೇಳಿದ್ದಾರೆ.

ಈ ಮಧ್ಯೆ, ಧರ್ಮಸ್ಥಳ ಪೊಲೀಸ್ ಠಾಣೆಯ ಮುಂದೆ ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಆಧಾರ ರಹಿತ ಆರೋಪ ಮಾಡುತ್ತಿರುವುದರಿಂದ ಯೂಟ್ಯೂಬರ್ ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪಾಂಗಾಳ ಕ್ರಾಸ್ ನಲ್ಲಿ ಘರ್ಷಣೆ ಸಂಭವಿಸಿದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ. ಅರುಣ್, ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಾ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!