Tuesday, June 9, 2026
HomeUncategorizedಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧದ ಅಪಪ್ರಚಾರ ಸಹಿಸಲು ಸಾಧ್ಯವಿಲ್ಲ, ಜನ ಬೀದಿಗಳಿಯುವ ಸಂದರ್ಭ ಸೃಷ್ಟಿಯಾಗದಿರಲಿ; ಸರ್ಕಾರಕ್ಕೆ...

ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧದ ಅಪಪ್ರಚಾರ ಸಹಿಸಲು ಸಾಧ್ಯವಿಲ್ಲ, ಜನ ಬೀದಿಗಳಿಯುವ ಸಂದರ್ಭ ಸೃಷ್ಟಿಯಾಗದಿರಲಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ

- Advertisement -
- Advertisement -

ಕಾರ್ಕಳ: ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ ಮತ್ತು ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುನೀಲ್ ಕುಮಾರ್, ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು, ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗ್ರತೆಯ ಹೆಜ್ಜೆ ಇಡಲಿ ಎಂದು ಹೇಳಿದ್ದಾರೆ.ಅಲ್ಲದೇ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಎಚ್ಚರಿಸಿರುವ ಸುನೀಲ್ ಕುಮಾರ್, ಸಹನೆಗೂ ಒಂದು ಮಿತಿ ಇದೆ, ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದು ಹೇಳಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನೆ ಮಾಡಿರುವ ಶಾಸಕ ಸುನೀಲ್ ಕುಮಾರ್, ಹಿಂದು ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ಎಂದು ಕೇಳಿದ್ದಾರೆ.

- Advertisement -

Latest News

error: Content is protected !!