Friday, June 5, 2026
Homeತಾಜಾ ಸುದ್ದಿಏರ್ ಪೋರ್ಟ್ ನಲ್ಲಿ ಸಚಿವರ ಮಧ್ಯೆ ನಿಂತು ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ...

ಏರ್ ಪೋರ್ಟ್ ನಲ್ಲಿ ಸಚಿವರ ಮಧ್ಯೆ ನಿಂತು ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ ಮೊಮ್ಮಗ

- Advertisement -
- Advertisement -

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಲು ಆಗಮಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ನವದೆಹಲಿಯಿಂದ ಹೆಚ್ಎಎಲ್ ಏರ್ ಪೋರ್ಟ್ ಗೆ ವಿಶೇಷ ವಿಮಾನದ ಮೂಲಕ ಬಂದು ಇಳಿದಿದ್ದಾರೆ.ಹೆಚ್ಎಎಲ್ ಏರ್ ಪೋರ್ಟ್ ನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಜೊತೆ ಸಿಎಂ ಮೊಮ್ಮಗ ಕೂಡಾ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ್ದಾರೆ.

ಸಚಿವರ ಮಧ್ಯೆ ಸಾಲಿನಲ್ಲಿ ನಿಂತಿದ್ದ ಸಿಎಂ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಕೂಡಾ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ್ದಾರೆ.ವಿಧಾನಸೌಧದಲ್ಲಿ ಕಳೆದ ತಿಂಗಳು ನಡೆದಿದ್ದ ಆರ್ ಸಿಬಿ ಐಪಿಎಲ್ ಕಪ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ಮೊಮ್ಮಗ ಧವನ್ ಇಂದು ಏರ್ ಪೋರ್ಟ್ ನಲ್ಲಿ ಲೋಕಸಭೆ ವಿಪಕ್ಷ ನಾಯಕರಿಗೆ ಸ್ವಾಗತ ಕೋರಿರುವುದು ಗಮನ ಸೆಳೆದಿದೆ.

- Advertisement -

Latest News

error: Content is protected !!