Saturday, June 6, 2026
Homeಕರಾವಳಿಮಂಗಳೂರುಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ; ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿಎರಡು ಪ್ರತ್ಯೇಕ...

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ; ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿಎರಡು ಪ್ರತ್ಯೇಕ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51) ಎಂಬವರು ದೂರು ನೀಡಿದ್ದು ನಾನು ದಿನಾಂಕ:08-08-2025 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿ ರಾಕೇಶ್ ಶೆಟ್ಟಿ ಎಂಬಾತನು, ಯೂಟ್ಯೂಬ್‌ನಲ್ಲಿ  ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025  ಕಲಂ  296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನು ಬೆಳ್ತಂಗಡಿ ನಿವಾಸಿ ದಯಾನಂದ ( 44) ರವರು, ದಿನಾಂಕ: 08-08-2025 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಪರಿಶೀಲಿಸುತ್ತಿರುವಾಗ, sandya voice for justice  ಎಂಬ ಪೇಸ್ ಬುಕ್  ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025  ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!