Friday, June 26, 2026
Homeಕರಾವಳಿಬೆಳ್ತಂಗಡಿ: ದೂರುದಾರನ ಹೇಳಿಕೆಯಂತೆ ಬಾಹುಬಲಿ ರಸ್ತೆಯಲ್ಲಿ 100 ಮೀಟರ್ ಕೆಳಗಡೆ ಎಡಭಾಗದಲ್ಲಿ ಕಾರ್ಯಾಚರಣೆ

ಬೆಳ್ತಂಗಡಿ: ದೂರುದಾರನ ಹೇಳಿಕೆಯಂತೆ ಬಾಹುಬಲಿ ರಸ್ತೆಯಲ್ಲಿ 100 ಮೀಟರ್ ಕೆಳಗಡೆ ಎಡಭಾಗದಲ್ಲಿ ಕಾರ್ಯಾಚರಣೆ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್.ಐ.ಟಿ. ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಸಕಲ ಸಿದ್ಧತೆಯೊಂದಿಗೆ ಆಗಮಿಸಿರುವ ಎಸ್.ಐ.ಟಿ. ತಂಡ, ಎಸಿ, ತಹಶೀಲ್ದಾರ್, ಅರಣ್ಯ ಸಹಿತ ಎಲ್ಲ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.

ಶುಕ್ರವಾರ ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ 16 ಮತ್ತು 16A ಎರಡು ಸ್ಥಳದಲ್ಲಿ ಶೋಧ ನಡೆಸಿತ್ತು. ಜತೆಗೆ ಇನ್ನೆರಡು ಸ್ಥಳ ಅಗೆದಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಧಿಕೃತವಾಗಿಲ್ಲ.

ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಶನಿವಾರ ಕರೆತಂದಿದ್ದಾರೆ. ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕಾದುನೋಡಬೇಕಿದೆ. 13ನೇ ಸ್ಥಳದ ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಆ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಕೈಗೊಂಡಿಲ್ಲ. ಇದೀಗ ಹೊಸ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗೆ ಆಗಮಿಸಿದ್ದಾರೆ.

ಅನಾಮಿಕ ಬೆಳಗ್ಗೆ 10.15 ಗಂಟೆ ಸುಮಾರಿಗೆ ಪೊಲೀಸ್ ಬಂದೋಬಸ್ತ್ ನಲ್ಲಿ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದು, ಅಲ್ಲಿಂದ 12.05 ಗಂಟೆಗೆ ಬೆಳ್ತಂಗಡಿಯಿಂದ ಹೊರಟು 12.45 ಸುಮಾರಿಗೆ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿದರು.

- Advertisement -

Latest News

error: Content is protected !!