- Advertisement -
![]()
- Advertisement -
ಬೆಳ್ತಂಗಡಿ : ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಆ.9 ರಂದು ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(ಎ), 353(2) ಬಿಎನ್ಎಸ್ ನಂತೆ ಪ್ರಕರಣ ದಾಖಲಾಗಿದೆ.
- Advertisement -


