Tuesday, June 9, 2026
Homeತಾಜಾ ಸುದ್ದಿಮಹಿಳೆಯರ ಸುರಕ್ಷತೆಯ ನಿಟ್ಟಿನಲ್ಲಿ ಜಾರಿಗೆ ಬರಲಿದೆ ಅಕ್ಕಾ ಪಡೆ; ವಿಧಾನಸಭೆಯ ಅಧಿವೇಶನದಲ್ಲಿ ಮಾಹಿತಿ ನೀಡಿದ ಮಹಿಳಾ...

ಮಹಿಳೆಯರ ಸುರಕ್ಷತೆಯ ನಿಟ್ಟಿನಲ್ಲಿ ಜಾರಿಗೆ ಬರಲಿದೆ ಅಕ್ಕಾ ಪಡೆ; ವಿಧಾನಸಭೆಯ ಅಧಿವೇಶನದಲ್ಲಿ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

- Advertisement -
- Advertisement -

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಹತ್ವದ ಯೋಜನೆಯ ಬಗ್ಗೆ ಹೇಳಿಕೆಯನ್ನ ನೀಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್‌ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್.‌15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ. ಈಗಾಗಲೇ ಬೀದರ್‌ ಜಿಲ್ಲೆಯಲ್ಲಿ ಅಕ್ಕಾ ಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

- Advertisement -

Latest News

error: Content is protected !!