ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ 36 ವರ್ಷಗಳಿಂದ ಸಕ್ರಿಯರಾಗಿದ್ದ ಹಿರಿಯ ನಿರ್ದೇಶಕ ಎಸ್.ಮುರಳಿ ಮೋಹನ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬುಧವಾರ ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅವರು ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಅವರಿಗೆ 57 ವರ್ಷ ವಯಸ್ಸಾಗಿತ್ತು.
ಮುರಳಿ ಮೋಹನ್ ಅವರು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಆ್ಯಕ್ಷನ್ ಕಟ್ ಹೇಳಿದ್ದರು.
ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಐದಾರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಅವರು ಹೇಳಿಕೊಂಡಿದ್ದರು. ಈ ಶಸ್ತ್ರಚಿಕಿತ್ಸೆಗೆ 30-35 ಲಕ್ಷ ರೂ. ಬೇಕಾಗಿತ್ತು. ಸುದೀಪ್, ಉಪೇಂದ್ರ ಧನಸಹಾಯ ಮಾಡಿದ್ದರು.
ಇದೀಗ ಪ್ರತಿಭಾವಂತ ನಿರ್ದೇಶಕನ್ನು ಸ್ಯಾಂಡಲ್‌ವುಡ್ ಕಳೆದುಕೊಂಡಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


