Thursday, June 25, 2026
Homeಕರಾವಳಿಮಂಗಳೂರುಪುತ್ತೂರು;  ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ‌ಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಪುತ್ತೂರು;  ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ‌ಮರೆಸಿಕೊಂಡಿದ್ದ ಆರೋಪಿಗಳ ಬಂಧನ

- Advertisement -
- Advertisement -

ಪುತ್ತೂರು;  ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ‌ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣಾ ಅಕ್ರ  69/2023 ಕಲ:379 ಐ.ಪಿ.ಸಿ ಪ್ರಕರಣದಲ್ಲಿ 09 ಬಾರಿ ವಾರಂಟ್ ಜಾರಿಯಾಗಿದ್ದರೂ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್@ಶಿವು  ಎಂಬಾತನನ್ನು, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡರವರು ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಕಿರಣ್ ಜಾನ್ಸನ್ ಡಿಸೋಜಾ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣಾ ಪಿ.ಎಸ್.ಐ ಕೌಶಿಕ್  ರವರ ನೇತೃತ್ವದ, ಸಿಬ್ಬಂದಿಗಳಾದ  ಸಿ ಹೆಚ್ ಸಿ 685 ಪ್ರಶಾಂತ ರೈ, ಸಿಹೆಚ್ ಸಿ 1028 ಗಣೇಶ ಎನ್, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404  ಮಹಮ್ಮದ್ ಮೌಲಾನಾ,  ರವರುಗಳನ್ನು  ಒಳಗೊಂಡ ವಿಶೇಷ ತಂಡವು ದಿನಾಂಕ 12/08/2025 ರಂದು ಬೆಂಗಳೂರಿನ ಅಬ್ಬಿಗೆರೆ ಎಂಬಲ್ಲಿ ದಸ್ತಗಿರಿ ಮಾಡಿರುತ್ತಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ:14/2022, ಕಲಂ:394 ಐ.ಪಿ.ಸಿ. ಪ್ರಕರಣದಲ್ಲಿ ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 03 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಬೆಂಗಳೂರು, ಜಗಜೀವನ್ ರಾಮ್ ನಗರ ನಿವಾಸಿ ಸಯ್ಯದ್  ಕಲೀo @ ಕಲ್ಲು ಮಾಮು ಎಂಬಾತನನ್ನು, ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ  ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಪೊಲೀಸ್ ಉಪನಿರೀಕ್ಷರಾದ ಕೌಶಿಕ್  ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಠಾಣಾ CHC -826 ಶಿವರಾಮ ರೈ ಮತ್ತು dysp ವಿಶೇಷ ತಂಡದ ಸಿಬ್ಬಂದಿಗಳಾದ CPC 2384 ಶಾಂತಕುಮಾರ್, CPC 1035  ರವಿಕುಮಾರ್ , CPC 1926  ರಮೇಶ್ ರವರುಗಳನ್ನು ಒಳಗೊಂಡ ತಂಡವು ದಸ್ತಗಿರಿ ಮಾಡಿರುತ್ತಾರೆ. ಈ ಆಸಾಮಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 4 ಪ್ರಕರಣಗಳು ದಾಖಲಾಗಿರುತ್ತದೆ.

ಕಡಬ ಪೊಲೀಸ್ ಠಾಣಾ ಅ ಕ್ರ: 91/2019 ಕಲಂ: 341,323,324,504,506 R/w 34 IPC ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಡಬ ರಾಮಕುಂಜ ನಿವಾಸಿ ಯೂಸೂಫ್ (32) ಎಂಬಾತನನ್ನು, ಕಡಬ ಠಾಣಾ ಪೊಲೀಸರು ದಿನಾಂಕ 12.08.2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಸದ್ರಿ ಆಸಾಮಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!