ಬೆಂಗಳೂರು: ಬಿಜೆಪಿಯವರಿಗೆ ರಾಜಕಾರಣ ಮಾಡಲು ಧರ್ಮಸ್ಥಳ ಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬಿಜೆಪಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಮೊದಲು ಬಿಜೆಪಿಯವರು ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಮಗೆ ರಾಜಕಾರಣ ಮಾಡಲು ಧರ್ಮಸ್ಥಳ ಬೇಡ, ಹಿಂದುತ್ವ ಅವರ ಮನೆ ಆಸ್ತಿ ಎಂದು ತಿಳಿದುಕೊಂಡಿದ್ದಾರೆ ಎಂದು ಹೇಳಿರುವ ಡಿ.ಕೆ. ಶಿವಕುಮಾರ್, ಧರ್ಮಸ್ಥಳದ ಬಗ್ಗೆ ಪ್ರೀತಿ ಅವರಿಗೆ ಇಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ತನಿಖೆ ಮಾಡಲಿಲ್ಲ ಅಂದಿದ್ದರೆ ಏನು ಹೇಳುತ್ತಿದ್ದರು ಎಂದು ಪ್ರಶ್ನಿಸಿರುವ ಡಿಸಿಎಂ, ಸರ್ಕಾರದ ತನಿಖೆಯಲ್ಲಿ ನಾನು ಭಾಗಿಯಾಗಲ್ಲ, ಕಾನೂನು ಪ್ರಕಾರ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲೂ ವಿಚಾರ ಚರ್ಚೆಯಾಗಿದ್ದು, ಎಸ್ಐಟಿ ತನಿಖೆ ಮುಂದುವರಿಕೆ ಬಗ್ಗೆ ಗೃಹ ಸಚಿವರು ಮತ್ತು ಸಿಎಂ ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.


