Wednesday, June 24, 2026
Homeತಾಜಾ ಸುದ್ದಿಹಾಸನದಲ್ಲಿ ವರುಣನ ಆರ್ಭಟ; ಶಿರಾಡಿಘಾಟ್ ರಸ್ತೆಯ ಹಲವೆಡೆ ಭೂಕುಸಿತ

ಹಾಸನದಲ್ಲಿ ವರುಣನ ಆರ್ಭಟ; ಶಿರಾಡಿಘಾಟ್ ರಸ್ತೆಯ ಹಲವೆಡೆ ಭೂಕುಸಿತ

- Advertisement -
- Advertisement -

ಹಾಸನದಲ್ಲಿ ವರುಣನ ಆರ್ಭಟ  ಮುಂದುವೆರೆದಿದ್ದು ಶಿರಾಡಿಘಾಟ್ ರಸ್ತೆಯ ಹಲವೆಡೆ ಭೂಕುಸಿತವಾಗಿದೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾಗಿದ್ದು ವಾಹನ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿಯಿಂದ ಹಲವೆಡೆ ಭೂಕುಸಿತವಾಗಿದೆ. ಮರ, ಗಿಡಗಳ ಸಮೇತ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮತ್ತೊಂದೆಡೆ ವೀಕೆಂಡ್ ಹಾಗೂ ಹಬ್ಬದ ಹಿನ್ನೆಲೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸಂಚಾರ ಇರೋದರಿಂದ  ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರ ಪರದಾಡುತ್ತಿದ್ದಾರೆ. ಬಹುತೇಕ ಶಿರಾಡಿಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ರಸ್ತೆ ಮಧ್ಯೆ ನೂರಾರು ವಾಹನಗಳು ನಿಂತಿವೆ. ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

- Advertisement -

Latest News

error: Content is protected !!