- Advertisement -
![]()
- Advertisement -
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ.ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ರಾಧಾಕೃಷ್ಣನ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.
ತಮಿಳುನಾಡು ಮೂಲದವರಾಗಿರುವ ರಾಧಾಕೃಷ್ಣನ್ ಹಾಲಿ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾರೆ. ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು.
ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
- Advertisement -


