ಮಂಗಳೂರು; ಮಹೇಶ್ ಶೆಟ್ಟಿ ತಿಮರೋಡಿಯನ್ನು ಯಾಕೆ ಅರೆಸ್ಟ್ ಮಾಡುತ್ತಿಲ್ಲ?ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡದೇ ತನಿಖೆ ನಡೆಸುವುದಕ್ಕೆ ವಿರೋಧವಿದೆ ಎಂದು ಹೇಳಿದ್ದಾರೆ. ತಮ್ಮದೇ ಸರಕಾರದ ವಿರುದ್ದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನ ಬಂಧಿಸುವುದಕ್ಕೆ ನಿಮ್ಮಿಂದ ಆಗೋದಿಲ್ವಾ, ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆದರೆ ನನ್ನ ವಿರೋಧವಿದೆ ಎಂದು ಗರಂ ಆಗಿದ್ದಾರೆ.
ಇನ್ನು ಮುಂದೆ ಅನಾಮಿಕನನ್ನು ಧರ್ಮಸ್ಥಳ ದ್ವಾರ ದಾಟಿ ದೇವಸ್ಥಾನದ ವಠಾರಕ್ಕೆ ಬರಲು ನಾವು ಬಿಡುವುದಿಲ್ಲ. ಮತ್ತೆ ಬಾಹುಬಲಿ ಬೆಟ್ಟಕ್ಕೆ ಬಂದರೆ ನಾನು ಮುಂದೆ ನಿಲ್ಲುತ್ತೇನೆ ಎಂದಿದ್ದಾರೆ. ಮುಂದಿನ ತನಿಖೆ ಏನಿದ್ದರೂ ಮಂಪರು ಪರೀಕ್ಷೆ ನಂತರವೇ ಆಗಬೇಕು. ತಿಮರೋಡಿಯನ್ನು ಬಂಧಿಸಿದ ನಂತರವೇ ಮುಂದಿನ ತನಿಖೆ ನಡೆಯಬೇಕು. ತಿಮರೋಡಿಯನ್ನು ಬಂಧಿಸುವುದು ಸರ್ಕಾರಕ್ಕೆ ಕಷ್ಟದ ಕೆಲಸ ಅಲ್ಲ. ರಾಜ್ಯ ಸರ್ಕಾರ ಏನು ಮಾಡುತ್ತದೆ ನೋಡೋಣ ಎಂದಿದ್ದಾರೆ.


