Wednesday, June 3, 2026
Homeಕರಾವಳಿಶಾಲಾ ಬಸ್‌ಗೆ ಢಿಕ್ಕಿ ಹೊಡೆದ ಖಾಸಗಿ ಬಸ್; ಅಪಾಯದಿಂದ ವಿದ್ಯಾರ್ಥಿಗಳು ಪಾರು

ಶಾಲಾ ಬಸ್‌ಗೆ ಢಿಕ್ಕಿ ಹೊಡೆದ ಖಾಸಗಿ ಬಸ್; ಅಪಾಯದಿಂದ ವಿದ್ಯಾರ್ಥಿಗಳು ಪಾರು

- Advertisement -
- Advertisement -

ಬಂಟ್ವಾಳ: ಶಾಲಾ ಬಸ್‌ಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಬಸ್ಸೊಂದು ಪುಣಚದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದು, ಇದೇ ವೇಳೆ ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಖಾಸಗಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ಅಪಾಯವಾಗದೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!