- Advertisement -
![]()
- Advertisement -
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ಇದೀಗ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ.
ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿಯನ್ನು ವಿಚಾರಣೆ ನಡೆಸಿ ಬಂಧಿಸಿ, ಇದೀಗ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.
- Advertisement -


