- Advertisement -
![]()
- Advertisement -
ಉಡುಪಿ: ಸರಿಯಾದ ಕೆಲಸ ಸಿಗುತ್ತಿಲ್ಲ ಎಂದು ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಪ್ರಶಾಂತ್ (39)ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿಯೇ ಸೀಟ್ ಕುಷನ್ ಕೆಲಸ ಮಾಡಿಕೊಂಡಿದ್ದ ಪ್ರಶಾಂತ್, ಇತ್ತೀಚಿನ ದಿನಗಳಲ್ಲಿ ಸರಿಯಾದ ಕೆಲಸ ಇರದೇ ಇರುವ ಕಾರಣದಿಂದ ಮನನೊಂದು ತನ್ನ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಆಶಾ ನೀಡಿರುವ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Advertisement -


