Wednesday, June 24, 2026
Homeಕರಾವಳಿಬೆಳ್ತಂಗಡಿ : ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಬೆಳ್ತಂಗಡಿ : ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

- Advertisement -
- Advertisement -

ಬೆಳ್ತಂಗಡಿ : ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಆ.25 ರಂದು ರಾತ್ರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.

ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಬಂದಿದ್ದ ಮೀನುಹಿಡಿಯುವ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ.
ಕೆರೆಯಲ್ಲಿ ಈತನ ಮೃತದೇಹ ಆ.26 ರಂದು ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!