Saturday, June 6, 2026
Homeಕರಾವಳಿಮಂಗಳೂರುಮಂಗಳೂರು: ತಲಪಾಡಿ ಟೋಲ್ ಗೇಟ್ ಬಳಿ  ಭೀಕರ ಅಪಘಾತ; 5 ಮಂದಿ ಸ್ಥಳದಲ್ಲೇ ಸಾವು

ಮಂಗಳೂರು: ತಲಪಾಡಿ ಟೋಲ್ ಗೇಟ್ ಬಳಿ  ಭೀಕರ ಅಪಘಾತ; 5 ಮಂದಿ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.28 ರಂದು ಮಧ್ಯಾಹ್ನ ನಡೆದಿದೆ.

ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿಯಲ್ಲಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ.ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!