Thursday, June 4, 2026
Homeತಾಜಾ ಸುದ್ದಿಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳಲ್ಲಿ ಕ್ಷಮೆ ಯಾಚಿಸಬೇಕು; ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳಲ್ಲಿ ಕ್ಷಮೆ ಯಾಚಿಸಬೇಕು; ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

- Advertisement -
- Advertisement -

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಈ ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ʻಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಅಪಮಾನ ಮಾಡುತ್ತಿದೆ. ಧರ್ಮಸ್ಥಳದಿಂದ ಚಾಮುಂಡೇಶ್ವರಿ ದೇವಾಲಯದವರೆಗೂ ಈ ಕೃತ್ಯ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವುದಾದರೆ, ಅದೇನು ವಕ್ಫ್ ಮಂಡಳಿಯ ಆಸ್ತಿಯೇ? ಅಲ್ಲಿ ಯಾವಾಗ ಗೋರಿ ಕಟ್ಟುತ್ತಾರೆ ಎಂದು ಕೇಳಬೇಕಿದೆ ಎಂದರು.

ಸಿಎಂ ಸಿದ್ದರಾಮಯ್ಯ ಸುತ್ತ ಇರುವ ಪ್ರಗತಿಪರರು ಧರ್ಮಸ್ಥಳ ದೇವಾಲಯವನ್ನು ಕಿತ್ತುಕೊಂಡು ಲೂಟಿ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಹಿಂದೆ ಘಜನಿ ಮಾಡಿದಂತೆಯೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಲು ಮುಂದಾಗಿದೆ. ಮಂಜುನಾಥ ಸ್ವಾಮಿಗೆ ಕೆಟ್ಟ ಹೆಸರು ತರಲು ಎರಡು ವರ್ಷ ತಯಾರಿ ನಡೆಸಲಾಗಿದೆ. ಎಸ್ಐಟಿಗೆ 3-5 ಕೋಟಿ ರೂ. ಖರ್ಚಾಗಿದೆ. ಧರ್ಮವನ್ನು ರಕ್ಷಣೆ ಮಾಡಲು ಸೆಪ್ಟೆಂಬರ್ 1 ರಂದು ಸಮಾವೇಶ ಮಾಡಲಿದ್ದೇವೆ ಎಂದು ತಿಳಿಸಿದರು.

- Advertisement -

Latest News

error: Content is protected !!