- Advertisement -
![]()
- Advertisement -
ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಗವರ್ನರ್ ಮತ್ತು ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಉರ್ಜಿತ್ ಪಟೇಲ್ ಅವರನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಪ್)ಯ ಭಾರತದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಪಟೇಲ್ ಅವರ ನೇಮಕಾತಿಯು ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಗೆ ಬರುತ್ತದೆ ಎನ್ನಲಾಗಿದ್ದು, ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಮಾಡಲಾಗಿದೆ.
- Advertisement -


