ಚೆನ್ನೈ; ಡ್ಯೂಟಿಯಲ್ಲಿದ್ದಾಗಲೇ ಹಾರ್ಟ್ ಸರ್ಜನ್ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚೆನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಡಾ. ಗ್ರಾಡ್ಲಿನ್ ರಾಯ್(39) ಹೃದಯಾಘಾತಕ್ಕೆ ಬಲಿಯಾದವರು.
ಡಾ. ಗ್ರಾಡ್ಲಿನ್ ರಾಯ್ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಹೃದಯ ಶಸ್ತ್ರಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಗ್ರಾಡ್ಲಿನ್ ರಾಯ್ ಎಂಬವರು ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕುತ್ತಾ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿಯೇ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸಹದ್ಯೋಗಿಗಳು ಅವರನ್ನು ಬದುಕಿಸಲು ಪ್ರಯತ್ನಪಟ್ಟರೂ ಅದು ವಿಫಲವಾಗಿದೆ. ಈ ಆಘಾತಕಾರಿ ಸುದ್ದಿಯನ್ನು ಹೈದರಾಬಾದ್ ಮೂಲಕ ನರವಿಜ್ಞಾನಿ ಡಾ. ಸುಧೀರ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
“ಡಾ. ರಾಯ್ ಅವರ ಸಹೋದ್ಯೋಗಿಗಳು ಅವರ ಜೀವ ಉಳಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದರು. ಸಿಪಿಆರ್, ತುರ್ತು ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟಿಂಗ್, ಇಂಟ್ರಾ-ಅಯೋರ್ಟಿಕ್ ಬಲೂನ್ ಪಂಪ್ ಮತ್ತು ಇಸಿಎಂಒ ಅನ್ನು ಸಹ ಬಳಸಲಾಯಿತು. ಆದರೆ ಅವರನ್ನು ಉಳಿಸಲು ಮಾತ್ರ ಸಾಧ್ಯವಾಗಲಿಲ್ಲ” ಎಂದು ಡಾ. ಸುಧೀರ್ ಹೇಳಿದ್ದಾರೆ.


