Thursday, June 4, 2026
Homeಕರಾವಳಿಉಡುಪಿಕೊಲ್ಲೂರಿನಲ್ಲಿ ಸೌಪರ್ಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕೊಲ್ಲೂರಿನಲ್ಲಿ ಸೌಪರ್ಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

- Advertisement -
- Advertisement -

ಕೊಲ್ಲೂರಿನಲ್ಲಿ ಸೌಪರ್ಣಿಕ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ತ್ಯಾಗರಾಜ ನಗರದ ಗೋವಿಂದರಾಜು ಎಂಬವರ ಮಗಳು ವಸುಧ ಚಕ್ರವರ್ತಿ(೪೫) ಆತ್ಮಹತ್ಯೆ ಮಾಡಿಕೊಂಡವರು.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಆ.27 ರಂದು ಕೊಲ್ಲೂರಿಗೆ ಆಗಮಿಸಿದ್ದು, ಸೌಪರ್ಕಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಮಧ್ಯಾಹ್ನ ವೇಳೆ ಮಾವಿನಕಾರು ಬಳಿ ಮೃತದೇಹ ಪತ್ತೆಯಾಗಿದೆ.

ನೀರಿನ ರಭಸಕ್ಕೆ ಮೃತದೇಹ ಕೊಚ್ಚಿಕೊಂಡು ಹೋಗಿದ್ದು, ಕಳೆದ ಎರಡು ದಿನಗಳಿಂದ ಮೃತದೇಹಕ್ಕಾಗಿ ಕೊಲ್ಲೂರು ಪೊಲೀಸರು, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವಸುಧ ನದಿಗೆ ಹಾರಿದ ಸ್ಥಳದಿಂದ ಸುಮಾರು 3 ಕಿ.ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!