Thursday, June 4, 2026
HomeWorldವಾಣಿಜ್ಯ ಬಳಕೆ ಎಲ್‌ಪಿಜಿ ದರ 51 ರೂ. ಇಳಿಕೆ

ವಾಣಿಜ್ಯ ಬಳಕೆ ಎಲ್‌ಪಿಜಿ ದರ 51 ರೂ. ಇಳಿಕೆ

- Advertisement -
- Advertisement -

ದೇಶೀಯ ತೈಲ ಕಂಪೆನಿಗಳು ವಾಣಿಜ್ಯ ಬಳಕೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿದ್ದು, ಈ ಯೋಜನೆಯು ಸೋಮವಾರದಿಂದಲೇ ಜಾರಿಯಾಗಿದೆ.

ಈ ಯೋಜನೆಯಿಂದಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ. ಪರಿಷ್ಕೃತ ಬೆಲೆಯ ಪ್ರಕಾರ, ದಿಲ್ಲಿಯಲ್ಲಿ ೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ ೧,೫೮೦ ರೂ. ಆಗಿದ್ದು, ಜಾಗತಿಕ ಇಂಧನ ದರ ಲೆಕ್ಕಾಚಾರ ಮಾಡಿ ನಿಯಮಿತ ಮಾಸಿಕ ಪರಿಷ್ಕರಣೆಗಳ ಭಾಗವಾಗಿ ಈ ದರ ಇಳಿಕೆ ಕಡಿತ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!