- Advertisement -
![]()
- Advertisement -
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಅವರು ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದರು. ರೇಣುಕಾ ಸ್ವಾಮಿ ತನ್ನಿಂದ ನಿಧನ ಹೊಂದಿಲ್ಲ ಎಂಬುದನ್ನೂ ಉಲ್ಲೇಖಿಸಿ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಅರ್ಜಿ ವಜಾ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಹದಿನಾಲ್ಕು ದಿನಗಳ ಬಳಿಕ ಮತ್ತೆ ಜಾಮೀನು ಅರ್ಜಿ ಸಲ್ಲಿಸುವ ಅವಕಾಶ ಪವಿತ್ರಾ ಗೌಡಗೆ ಇದೆ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.
- Advertisement -


