Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; 7 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು; ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; 7 ಮಂದಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು; ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಬಂಧಿತರು.

ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಎರಡು ತಿಂಗಳ ಹಿಂದೆ ಕಾರ್ತಿಕ್ ಎಂಬಾತ ಇನ್‌ಸ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದ. ಪರಿಚಯ ಪ್ರೀತಿಗೆ ತಿರುಗಿದ್ದು ಕಳೆದ ಜೂನ್‌ ತಿಂಗಳಲ್ಲಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಕಾರ್ತಿಕ್, ಆಕೆಯನ್ನು ಅಡ್ಯಾರ್ ಫಾಲ್ಸ್ ಬಳಿ ಇರುವ ಕಾಡಿಗೆ ಕರೆದೊಯ್ದಿದ್ದು ಅಲ್ಲಿಯೇ ಅತ್ಯಾಚಾರ ಎಸಗಿದ್ದ.

ಘಟನಾ ಸ್ಥಳದಲ್ಲಿ ಕಾರ್ತಿಕ್ ಸ್ನೇಹಿತ ರಾಕೇಶ್‌ ಸಲ್ದಾನ ಎಂಬಾತನೂ ಇದ್ದು, ಬಳಿಕ ಆತನೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ. ಇದರ ದೃಶ್ಯವನ್ನು ಕಾರ್ತಿಕ್‌ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಕೆಲವು ದಿನಗಳ ಬಳಿಕ ಸ್ನೇಹಿತರಿಗೆ ಕಳುಹಿಸಿದ್ದ. 30 ಸೆಕಂಡಿನ ವಿಡಿಯೋ ಬಳಿಕ ವೈರಲ್ ಆಗಿತ್ತು. ಈ ವಿಚಾರ ತಿಳಿಯುತ್ತಲೇ ಆ.16ರಂದು ಸಂತ್ರಸ್ತ ಯುವತಿ ಬಜ್ಪೆ ಠಾಣೆಗೆ ದೂರು ನೀಡಿದ್ದಳು.‌ ಬಜೈ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿದ್ದಾನೆ.

ಬಾಲಕಿಯ ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸರು ಪೋಕ್ಸೊ ಕಾಲಂನಡಿ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರಗೈದಿರುವ ಆರೋಪಿಗಳಾದ ಕಾರ್ತಿಕ್ ಮತ್ತು ರಾಕೇಶ್ ಸಲ್ಡಾನ, ವೀಡಿಯೊ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಬಂಧಿಸಿದ್ದು, ಅಪ್ರಾಪ್ತ ಬಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ . ಘಟನೆಗೆ ಸಂಬಂಧಿಸಿ ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!